ಮೈಸೂರು: ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಸೇವೆಯಲ್ಲಿ 50 ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ.9ರಂದು ಚಿತ್ರದುರ್ಗದಲ್ಲಿ ಬಿಜೆಪಿ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಬಗ್ಗೆ ಸ್ವಪಕ್ಷದ ನಾಯಕರಾದ ಹೆಚ್ ವಿಶ್ವನಾಥ್ ವಿರೋಧ ವ್ಯಕ್ತಪಡಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್, ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ವಿರುದ್ಧ ದೇಶದ ಅತ್ಯಂತ ಕಠಿಣ ಕಾನೂನು ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಾಗಿದೆ. ಪೋಕ್ಸೋ ಕೇಸ್ ನಲ್ಲಿ ಸಿಲುಕಿರುವ ಯಡಿಯೂರಪ್ಪ ಅವರಿಗೆ ಅಭಿಮಾನೋತ್ಸವ ಕಾರ್ಯಕ್ರಮ ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಅಭಿನಂದಿಸಿ ಸನ್ಮಾನಿಸಲು ಬರುತ್ತಿದ್ದಾರೆ. ಪೋಕ್ಸೋ ಕೇಸ್ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವವವನ್ನು ಗೃಹ ಸಚಿವರೇ ಸನ್ಮಾನಿಸುತ್ತಿರುವುದು ನಿಜಕ್ಕೂ ದುರಂತವೇ ಸರಿ ಎಂದು ಬೇಸರ ವ್ಯಕ್ತ ಪಡಿಸಿದರು.
ಪೋಕ್ಸೋ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಅವರ ಅಭಿ ಎಂದರು.



