ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ನೇಮಕ ಹಿನ್ನೆಲೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ನಗರ ಘಟಕದ ಅಧ್ಯಕ್ಷ ಬೇಕ್ರಿ ಅರವಿಂದ್ ನೇತೃತ್ವದಲ್ಲಿ ವಿಜಯೇಂದ್ರ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.
ವಿಜಯೇಂದ್ರ ಅವರಿಗೆ ರಾಜಕೀಯ ಭವಿಷ್ಯದಲ್ಲಿ ಹೆಚ್ಚು ಒಳ್ಳೆಯದಾಗಲಿ. ಬಿಜೆಪಿ ಗೆಲವಿಗೆ ವಿಜಯೇಂದ್ರ ಅವಶ್ಯಕ ಇದೆ. ಮತ್ತಷ್ಟು ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.