ಬಾಗಲಕೋಟೆ: ನೇಕಾರರಿಗೆ ಹತ್ತು ಹೆಚ್.ಪಿ. ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಬನಹಟ್ಟಿ ನಗರದ ಹೆಸ್ಕಾಂ ಶಾಖಾಧಿಕಾರಿಗಳ ಕಚೇರಿಗೆ ನೇಕಾರರು ಮುತ್ತಿಗೆ ಹಾಕಿದ್ದಾರೆ.
ವಿದ್ಯುತ್ ದರ ಏರಿಕೆಯಾಗಿ ಹತ್ತು ಸಾವಿರ ವರೆಗೂ ಬಿಲ್ ಬಂದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನೇಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಪೂರ್ವದಲ್ಲಿ ಹೇಳಿದಂತೆ ಬೇಡಿಕೆಗಳನ್ನು ಈಡೇರಿಸಲು ನೇಕಾರರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕರ್ನಾಟಕ ರಾಜ್ಯ ನೇಕಾರ ಒಕ್ಕೂಟಗಳ ರಾಜ್ಯ ಅಧ್ಯಕ್ಷ ಶಿವಲಿಂಗ್ ಟರ್ಕಿ, ನೇಕಾರರ ಸಮಸ್ಯೆ ಬಗೆಹರಿಸಲು ಮನವಿ ಮಾಡಿ, ನೇಕಾರ ಸಮಾಜ ಬಾಂಧವರು ಸಭೆ ಕರೆಯುವಂತೆ ಆಗ್ರಹಿಸಿದರು.
ಇದು ವರೆಗೂ ರಾಜ್ಯದಲ್ಲಿ 47 ಜನ ನೇಕಾರರು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.