Monday, June 30, 2025
Google search engine

Homeರಾಜ್ಯಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಿಸಲು ಮುಂದಾದ ಬಮೂಲ್

ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಿಸಲು ಮುಂದಾದ ಬಮೂಲ್

ಬೆಂಗಳೂರು: ನಂದಿನಿ ಬ್ರಾಂಡ್‌ನ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಮತ್ತಷ್ಟು ಜನರಿಗೆ ಸುಲಭವಾಗಿ ಲಭ್ಯವಾಗಿಸಲು, ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಮಹತ್ವದ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ, ನಗರದ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.

ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಈ ಪತ್ರದಲ್ಲಿ, ದಿನದಿಂದ ದಿನಕ್ಕೆ ಮೆಟ್ರೊ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ನಂದಿನಿ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆಯಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ. ಮೆಟ್ರೊ ನಿಲ್ದಾಣಗಳ ಒಳಭಾಗ ಅಥವಾ ನಿಲ್ದಾಣದ ಪಕ್ಕದ ಪ್ರಾಥಮಿಕ ಸ್ಥಳಗಳಲ್ಲಿ ನಂದಿನಿ ಮಳಿಗೆಗಳು ಸ್ಥಾಪನೆಯಾದರೆ, ಪ್ರಯಾಣಿಕರಿಗೆ ತಾಜಾ ಹಾಲು, ಮೊಸರು, ಲಸಿ, ಪೇಡಾ, ಐಸ್‌ಕ್ರೀಮ್ ಹಾಗೂ ಇತರೆ ಹಾಲಿನ ಉತ್ಪನ್ನಗಳು ಸುಲಭವಾಗಿ ಲಭ್ಯವಾಗಲಿವೆ ಎಂಬ ನಿರೀಕ್ಷೆ ಇದೆ.

ದಕ್ಷಿಣ ಭಾರತದಲ್ಲಿಯೇ ಅತ್ಯಂತ ದೊಡ್ಡ ಹಾಲು ಉತ್ಪಾದಕರ ಸಹಕಾರ ಸಂಘವಾಗಿರುವ ಬಮೂಲ್, 2250 ಸಹಕಾರಿ ಸಂಘಗಳನ್ನು ಹೊಂದಿದೆ. ನಿತ್ಯ 18 ಲಕ್ಷ ಲೀಟರ್‌ಗೂ ಹೆಚ್ಚು ಹಾಲು ಶೇಖರಿಸಿ, ಸಂಸ್ಕರಿಸಿ, ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳ ನಾಗರಿಕರಿಗೆ ಪೂರೈಕೆ ಮಾಡುತ್ತಿದೆ.

RELATED ARTICLES
- Advertisment -
Google search engine

Most Popular