Saturday, December 6, 2025
Google search engine

Homeಅಪರಾಧಬ್ಯಾನರ್‌ ಗಲಾಟೆ: ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಬ್ಯಾನರ್‌ ಗಲಾಟೆ: ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರ ಕೊಲೆಯಾಗಿದ್ದು, ಚಿಕ್ಕಮಗಳೂರಿನ ಸಖರಾಯಪಟ್ಟಣ ಬಸ್ ನಿಲ್ದಾಣದ‌ ಮುಂಭಾಗ ಬ್ಯಾನರ್ ವಿಚಾರಕ್ಕೆ ಭಜರಂಗದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು. ಈ ಘರ್ಷಣೆ ವೇಳೆ ಗಣೇಶ್ ಎಂಬಾತನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಭಜರಂಗದಳ ಕಾರ್ಯಕರ್ತರಾದ ಸಂಜಯ್‌, ಮಿಥುನ್‌ ಎಂಬುವವರು ಕಾಂಗ್ರೆಸ್​ ಕಾರ್ಯಕರ್ತ ಗಣೇಶ್​ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂರ್ಭದಲ್ಲಿ ದಾಳಿ ನಡೆಸಿದ ಸ್ಥಳದಲ್ಲಿಯೇ ಗಣೇಶ್‌ ಸಾವನ್ನಪ್ಪಿದ್ದು, ಈ ನಡುವೆ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದೆ. ಈತನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ‌ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮತ್ತೋರ್ವ ಆರೋಪಿ ‌ಮಿಥುನ್ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಗಣೇಶ್​ ತಲೆ‌ ಭಾಗಕ್ಕೆ ಮಚ್ಚಿನಿಂದ ‌‌ದಾಳಿ ನಡೆಸಿದ ಪರಿಣಾಮ ಆತ ಸಾವನ್ನಪ್ಪಿದ್ದು, ಆತನ ಮೃತದೇಹವನ್ನ ಮಲ್ಲೇಗೌಡ ‌ಸರ್ಕಾರಿ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದ್ದು, ಬಳಿಕ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆಯಿದೆ ಎಂದಿದ್ದಾರೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ, ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನಿಗೆ ಚಾಕುವಿನಿಂದ ಇರಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ತೇರಂಬಳ್ಳಿಯಲ್ಲಿ ನಡೆದಿದೆ. ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬ ವ್ಯಕ್ತಿಯಿಂದ ಕೈ ಮುಖಂಡ ಸುನೀಲ್​ಗೆ ಚಾಕು ಇರಿಯಲಾಗಿದ್ದು, ಈ ಬಗ್ಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕುವಿನಿಂದ ಇರಿದ ಹಿನ್ನಲೆ ರಕ್ತಸ್ರಾವ ಉಂಟಾಗಿ ಸುನೀಲ್​​ ಅಸ್ವಸ್ಥರಾಗಿದ್ದಾರೆ. ಕೂಡಲೇ ಗಾಯಾಳು ಸುನೀಲ್​ನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular