Sunday, June 29, 2025
Google search engine

Homeರಾಜ್ಯ88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಬಳ್ಳಾರಿ: ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರತಿಷ್ಠಿತ ʼಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿʼ ವಿಜೇತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿದ್ದಾರೆ.

ಭಾನುವಾರ ಬಳ್ಳಾರಿಯಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪದ ರಾಜ್ಯಾಧ್ಯಕ್ಷರಾದ ಮಹೇಶ್ ಜೋಶಿ, ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಸಮ್ಮೇಳನದಲ್ಲಿ ದೀಪ ಭಸ್ತಿ ಅವರನ್ನು ಕೂಡ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

RELATED ARTICLES
- Advertisment -
Google search engine

Most Popular