ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ
ರಾಜ್ಯ ಸರಕಾರದಲ್ಲಿ ಖುರ್ಚಿಗಾಗಿ ಯುದ್ಧ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರಕಾರದಲ್ಲಿ ಖುರ್ಚಿಗಾಗಿ ಯುದ್ಧ ಪ್ರಾರಂಭವಾಗಿದೆ. ಎಲ್ಲರೂ ಬಿಹಾರ ವಿಧಾನಸಭೆಯ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಅದಾದ ಬಳಿಕ ಬಹಿರಂಗವಾಗಿ ಎಲ್ಲರಿಗೂ ತಿಳಿಯುತ್ತದೆ ಎಂದರು.
ಕಬ್ಬಿನ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ರೈತರ ಹೋರಾಟದಲ್ಲಿ ಭಾಗಿಯಾಗಲು ನಾನು ಯಡಿಯೂರಪ್ಪ ಮಗನಾಗಿ ಬಂದಿದ್ದೇನೆ. ಯಾರು ಯಾರು ಕಾರ್ಖಾನೆಗಳಿವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಕ್ಕರೆ ಕಾರ್ಖಾನೆ ಸಾಹುಕಾರ್ ಗಳ ಜೊತೆಗೆ ಅಧಿಕಾರಿಗಳು ಸೇರಿ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಬೇಕು ಎಂದರು.
ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತವಾಗಿರುವ ಬೇಡಿಕೆಗಳನ್ನು ರಾಜ್ಯ ಸರಕಾರ ಮುಂದಾಳತ್ವ ವಹಿಸಿ ಈಡೇರಿಸುವ ಆಗ್ರಹ ಇದೆ. ರಾಜ್ಯ ಸರಕಾರ ಸ್ಪಂದನೆ ಮಾಡದಿದ್ದಾಗ ವಿರೋಧ ಪಕ್ಷವಾಗಿ ಬೆಂಬಲ ನೀಡಬೇಕಿದೆ. ಹಾಗಾಗಿ ನಾನು ಸಹ ಎಲ್ಲಾ ಪಕ್ಷದ ಮುಖಂಡರ ಜೊತೆಗೆ ಚರ್ಚೆ ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ನಾನು ಬಂದಿದ್ದೇನೆ ಎಂದರು.
ರಾಜ್ಯದ ಮುಖ್ಯಮಂತ್ರಿ ಕಳೆದ 2014ರಲ್ಲಿ ಅಧಿವೇಶನ ನಡೆಯುವಾಗ. ರೈತ ವಿಠ್ಠಲ್ ಅರಬಾವಿಯವರು ಕಬ್ಬಿನ ದರದ ವಿಚಾರದಲ್ಲಿ ಪ್ರಾಣ ಕಳೆದುಕೊಂಡರು. ಆಗ ಯಡಿಯೂರಪ್ಪ ಅವರು ಹೋರಾಟ ಮಾಡಿ ಅಂದಿನ ಸಿಎಂಗೆ ಒತ್ತಾಯಿಸಿ ಯಶಸ್ವಿಯಾಗಿದ್ದರು.
ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಅತೀವೃಷ್ಟಿ ಸಂದರ್ಭದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾನು ಪ್ರವಾಸ ಮಾಡಿದೆ. ಭೀಕರ ಮಳೆಯಿಂದ ತೊಂದರೆಗಿಡಾದಾಗ ಉಸ್ತುವಾರಿ ಸಚಿವರು, ಕಂದಾಯ ಸಚಿವರು, ಕೃಷಿ ಸಚಿವರು ಉತ್ತರ ಕರ್ನಾಟಕ ಪ್ರವಾಸ ಮಾಡಲಿಲ್ಲ. ರೈತರು ಇಂದು ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರ ಕಿಂಚಿತ್ತೂ ತಲೆ ಕೆಡಸಿಕೊಳ್ಳದೇ ಇದ್ದಾಗ ನಾವು ಹೋರಾಟಕ್ಕೆ ಬಂದಿದ್ದೇವೆ ಎಂದರು.
6ಮಿಲಿಯನ್ ಟನ್ ಕಬ್ಬು ಅರಿಯುತ್ತಾರೆ. 50-60ಸಾವಿರ ಕೋಟಿ ರಾಜ್ಯ ಸರಕಾರಕ್ಕೆ ಅದರಿಂದ ಆದಾಯ ಬರುತ್ತಿದೆ. ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿ ಕೇಳಲು ರಾಜ್ಯ ಸರಕಾರ ಮುಂದೆ ಬರುತ್ತಿಲ್ಲ ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮಾಜಿ ಬುಡಾ ಅಧ್ಹಕ್ಷ ಘೂಳಪ್ಪ ಹೊಸಮನಿ, ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



                                    