Friday, September 12, 2025
Google search engine

Homeರಾಜ್ಯಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಯಾರೇ ಆಗಿರಲಿ ಕ್ರಮ ಅವಶ್ಯ : ಸಚಿವ ಜಿ. ಪರಮೇಶ್ವರ್

ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಯಾರೇ ಆಗಿರಲಿ ಕ್ರಮ ಅವಶ್ಯ : ಸಚಿವ ಜಿ. ಪರಮೇಶ್ವರ್

ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದರು.

ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೇ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು.

ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೋ? ಒಂದಂತು ನಿಜ ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಎಎಸ್‌ಪಿ ವರ್ಗಾವಣೆ ಮಾಡಿರುವ ಕುರಿತು ಮಾತನಾಡಿ, ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಒಬ್ಬ ಇನ್‌ಸ್ಪೆಕ್ಟರ್ ಆಗಿರಬಹುದು, ಸಬ್ ಇನ್‌ಸ್ಪೆಕ್ಟರ್ ಆಗಿರಬಹುದು, ಅವರ ಕರ್ತವ್ಯ ಲೋಪ ಕಂಡು ಬಂದಾಗ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

ಧರ್ಮಸ್ಥಳ ವಿಚಾರವಾಗಿ, ಮೂರು ಲಾಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೂರು ತೆಗೆದುಕೊಳ್ಳಬೇಕ, ಬೇಡವೇ ಎಂಬುದನ್ನು ಎಸ್‌ಐಟಿಯವರು ಪರಿಶೀಲಿಸುತ್ತಾರೆ. ಪ್ರಕರಣ ಬೇರೆಬೇರೆ ದಿಕ್ಕಿಗೆ ಹೋಗುವಂತ ಪ್ರಯತ್ನ ನಡೆದರೆ, ಎಸ್‌ಐಟಿಯವರು ಬೇರೆ ತರ ತನಿಖೆ ಮಾಡುತ್ತಾರೆ ಎಂದು ಹೇಳಿದರು.

ಯಾರೋ ಕೊಟ್ಟ ಹೇಳಿಕೆ ಮೇಲೆ ನಾವು ತೀರ್ಮಾನ ಮಾಡುವುದಿಲ್ಲ. ಎಸ್‌ಐಟಿ ಮುಂದೆ ಏನು ದೂರು ಕೊಟ್ಟಿರುತ್ತಾರೆ. ಅದಕ್ಕೆ ಸಾಕ್ಷ್ಯ ಕೊಟ್ಟಿರುತ್ತಾರೆ. ಅದೆಲ್ಲವನ್ನು ನೋಡಿ ಎಸ್‌ಐಟಿಯವರು ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕೆಂದರೆ ಕೇಳುತ್ತಾರೆ. ಸದ್ಯಕ್ಕೆ ಯಾವುದೇ ಅನುಮತಿ ಕೇಳುವುದಕ್ಕೆ ಬಂದಿಲ್ಲ ಎಂದರು.

ಪ್ರತಿನಿತ್ಯ ನಾವು ಏನು ಮಾಡುತ್ತಿದ್ದೇವೆ ಎಂದು ಎಸ್‌ಐಟಿಯವರು, ಮಾಧ್ಯಮಕ್ಕಾಗಲಿ ಅಥವಾ ಸಾರ್ವಜನಿಕರಿಗಾಗಲಿ ಹೇಳುವುದಿಲ್ಲ. ಅನೇಕ ವಿಚಾರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ. ಇದರಿಂದ ಎಸ್‌ಐಟಿ ವೇಗ ಕಳೆದುಕೊಂಡು ಬಿಟ್ಟಿದೆ, ತನಿಖೆ ನಡೆಯುತ್ತಿಲ್ಲ ಅಂದುಕೊಳ್ಳಬಾರದು. ಅನೇಕ ವಿಚಾರಗಳಲ್ಲಿ ಸಂಪೂರ್ಣ ಮಾಹಿತಿ ಬರುವವರೆಗೂ ಎಸ್‌ಐಟಿಯವರು ನಮಗೂ ಹೇಳುವುದಿಲ್ಲ ಎಂದರು.

ಧರ್ಮಸ್ಥಳ ಆರೋಪ ಪ್ರಕರಣದಲ್ಲಿ ಚಿನ್ನಯ್ಯನ ಬೆಂಬಲವಾಗಿ ನಿಂತವರನ್ನು ಬಂಧಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರನ್ನು ಬಂಧಿಸಬೇಕು, ಯಾವಾಗ ಬಂಧಿಸಬೇಕು ಎಂಬುದನ್ನು ನಾವು ಎಸ್‌ಐಟಿಯವರಿಗೆ ಹೇಳಕ್ಕಾಗುತ್ತದೆಯೇ? ಮಾಧ್ಯಮದವರು ಹೇಳಿದನ್ನು ಗಣನೆಗೆ ತೆಗೆದುಕೊಂಡು ಕೂಡಲೇ ಬಂಧಿಸಲು ಆಗುವುದಿಲ್ಲ. ಅವರಿಗೆ ಏನು ಮಾಹಿತಿ ಇದೆ, ಬೇಕಾದ ಅಗತ್ಯ ಪುರಾವೆ, ಸಾಕ್ಷ್ಯ ಸಿಗಬೇಕಲ್ಲ. ಅದನ್ನು ನೋಡಿಕೊಂಡು ಆನಂತರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಾಹಿತಿ ಬಾನು ಮುಷ್ತಾಕ್ ಅವರಿಗೆ ಭದ್ರತೆ ಕೊಟ್ಟೆ ಕೊಡುತ್ತೇವೆ. ಈ ಬಗ್ಗೆ ಯಾರು ಏನು ಹೇಳುವುದು ಬೇಕಾಗಿಲ್ಲ. ಭದ್ರತೆ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED ARTICLES
- Advertisment -
Google search engine

Most Popular