Monday, December 1, 2025
Google search engine

Homeರಾಜ್ಯಸುದ್ದಿಜಾಲಬೆಳಗಾವಿ: ಮೈಸೂರು ದಸರಾ ಮಾದರಿ ವಸ್ತು ಪ್ರದರ್ಶನಕ್ಕೆ ಚಾಲನೆ.

ಬೆಳಗಾವಿ: ಮೈಸೂರು ದಸರಾ ಮಾದರಿ ವಸ್ತು ಪ್ರದರ್ಶನಕ್ಕೆ ಚಾಲನೆ.

ವರದಿ :ಸ್ಟೀಫನ್ ಜೇಮ್ಸ್.

ಬೆಳಗಾವಿ: ‘ದಸರಾ ವೇಳೆ ಮೈಸೂರಿನಲ್ಲಿ ಮಾತ್ರ ನಡೆಯುತ್ತಿದ್ದ ವಸ್ತು ಪ್ರದರ್ಶನವನ್ನು ಈ ಬಾರಿ ಬೆಳಗಾವಿಯಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಕಿತ್ತೂರು ಕರ್ನಾಟಕದ ಜನರು, ಅದರಲ್ಲೂ ಶಾಲೆ-ಕಾಲೇಜು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು

ಇಲ್ಲಿನ ಸಿಪಿಇಡಿ ಮೈದಾನದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಆಯೋಜಿಸಿರುವ ಮೈಸೂರು ದಸರಾ ಮಾದರಿ ವಸ್ತು ಪ್ರದರ್ಶನಕ್ಕೆ ಭಾನುವಾರ ರಾತ್ರಿ ಚಾಲನೆ ನೀಡಿ ಅವರು ಮಾತನಾಡಿದರು.

ನ.30ರಿಂದ 2026ರ ಜನವರಿ 11ರವರೆಗೆ ನಡೆಯಲಿರುವ ಪ್ರದರ್ಶನದಲ್ಲಿ 15 ಇಲಾಖೆಗಳ ಮಳಿಗೆ ಸ್ಥಾಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜತೆಗೆ, ಆಹಾರ ಮಳಿಗೆ ತೆರೆಯಲಾಗಿದೆ. ಮನರಂಜನೆ ಚಟುವಟಿಕೆ ಇರಲಿವೆ’ ಎಂದರು.
‘ವಸ್ತು ಪ್ರದರ್ಶನಕ್ಕೆ ವಿವಿಧ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳನ್ನು ಕರೆತರುವ ಕೆಲಸವನ್ನು ಶಿಕ್ಷಣ ಇಲಾಖೆ ಮಾಡಬೇಕು. ಗ್ರಾಮೀಣ ಭಾಗದಿಂದಲೂ ಹೆಚ್ಚಿನ ಜನರು ಭೇಟಿ ಕೊಡಬೇಕು’ ಎಂದರು.
ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ‘ಮೈಸೂರು ದಸರಾ ವಸ್ತು ಪ್ರದರ್ಶನ ಕರ್ನಾಟಕ ಮಾತ್ರವಲ್ಲ, ದೇಶಕ್ಕೆ ಮಾದರಿಯಾಗಿದೆ. ಮುಖ್ಯಮಂತ್ರಿ ಅನುಮತಿ ಪಡೆದು, ಬೆಳಗಾವಿಯಲ್ಲಿ ಇದನ್ನು ಆಯೋಜಿಸಿದ್ದೇವೆ’

ಶಾಸಕ ಆಸಿಫ್ ಸೇರ್, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸಂಜೀವ ಹನುಮಣ್ಣವರ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ ಇತರರಿದ್ದರು.
ಇದಕ್ಕೂ ಮುನ್ನ, ವಸ್ತು ಪ್ರದರ್ಶನದಲ್ಲಿನ ವಿವಿಧ ಮಳಿಗೆಗಳನ್ನು ಸಚಿವರು ವೀಕ್ಷಿಸಿದರು.

RELATED ARTICLES
- Advertisment -
Google search engine

Most Popular