ವರದಿ: ಸ್ಟೀಫನ್ ಜೇಮ್ಸ್
ಬೆಳಗಾವಿ: ಮೈಸೂರಿನಲ್ಲಿ ಜರುಗುವ 2025-26ನೇ ಸಾಲಿನ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಸೈಕ್ಲಿಂಗ್ ಸರ್ಧೆಯಲ್ಲಿ ಭಾಗವಹಿಸಲು ಬೆಳಗಾವಿ ಜಿಲ್ಲೆಯಿಂದ ಪುರುಷ ಮತ್ತು ಮಹಿಳಾ ಸೈಕ್ಲಿಂಗ್ ಕ್ರೀಡಾಪಟುಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿ ಕಳುಹಿಸಬೇಕಾಗಿರುವುದರಿಂದ ಸೆಪ್ಟೆಂಬರ, 18, 2025 ರಂದು ಬೆಳಗಾವಿ ಜಿಲ್ಲಾ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿರುತ್ತದೆ.
ಭಾಗವಹಿಸುವ ಬೆಳಗಾವಿ ಜಿಲ್ಲೆಯ ಆಸಕ್ತ ಸೈಕ್ಲಿಂಗ್ ಕ್ರೀಡಾಪಟುಗಳು ಸೆ. 18 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ
ಕಛೇರಿ ದೂರವಾಣಿ ಸಂಖ್ಯೆ. 0831-2474101 5 8748038494 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.