ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕರ್ಚಿಗನೂರು ಗ್ರಾಮದಲ್ಲಿ 13 ವರ್ಷದ ವೀರೇಶ್ ಎಂಬ ಬಾಲಕನು ಕುರಿ ಮೇಯಿಸುತ್ತಿದ್ದಾಗ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.
ಸದ್ಯ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾಲಕ ವೀರೇಶ್ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.