Tuesday, June 17, 2025
Google search engine

Homeರಾಜ್ಯಸುದ್ದಿಜಾಲಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆ: ಮೊದಲ ದಿನ 4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆ: ಮೊದಲ ದಿನ 4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ. 12ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ದಿನ 4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೊದಲ ದಿನವಾದ ಶುಕ್ರವಾರ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್ 2 ನಾಮಪತ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ. ತುಕಾರಾಂ 3 ನಾಮಪತ್ರ, ಬಿಜೆಪಿ ಅಭ್ಯರ್ಥಿ ಶ್ರೀರಾಮಲು 3 ಹಾಗೂ ಪಕ್ಷೇತರ ಅಭ್ಯರ್ಥಿ ಭಾಗ್ಯಲಕ್ಷ್ಮಿ ಒಟ್ಟು 4 ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular