ಬಳ್ಳಾರಿ: 09-ಬಳ್ಳಾರಿ (ಪ.) ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಪಿಜೆಪಿ (ಪ್ರಹಾರ್ ಜನಶಕ್ತಿ ಪಾರ್ಟಿ) ಪಕ್ಷದ ಅಭ್ಯರ್ಥಿ ಮಂಜುನಾಥ ಗೋಸಲ್ ಅವರು 2 ಸೆಟ್ ನಾಮಪತ್ರಗಳನ್ನು ಪಡೆದರು, ಪಕ್ಷೇತರ ಅಭ್ಯರ್ಥಿಯಾಗಿ ವಿರೇಶ್ ಮತ್ತು ನವಭಾರತ ಸೇನೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಸ್ವಾಮಿ ಪ್ರತಿ ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 12ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 15ರಂದು ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಇಹ್. 16ರಂದು ನಾಮಪತ್ರ ಸಲ್ಲಿಕೆ ಇರುವುದಿಲ್ಲ. ಏ 17ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ 18ರಂದು ಒಂದು ನಾಮಪತ್ರ ಹಾಗೂ ಏ.19ರಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದುವರೆಗೆ ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಿದೆ. ಏ. 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನಾಮಪತ್ರ ಹಿಂಪಡೆಯಲು ಏ. 22 ಕೊನೆಯ ದಿನವಾಗಿದೆ.
