Monday, May 26, 2025
Google search engine

Homeಅಪರಾಧಬೆಂಗಳೂರು: ಬಸ್‌ ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

ಬೆಂಗಳೂರು: ಬಸ್‌ ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

ಬೆಂಗಳೂರು: ಹೆಚ್ಚಿನ ಪ್ರಯಾಣಿಕರು ತುಂಬಿರುವ ಬಿಎಂಟಿಸಿ ಬಸ್‌ ಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಪ್ರಯಾಣಿಕರ ಸೋಗಿನಲ್ಲಿ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆಂಧ್ರ ಮೂಲದ ಆರು ಮಂದಿಯ ಗ್ಯಾಂಗ್‌ ವೈಟ್‌ ಫೀಲ್ಡ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದೆ.

ಆಂಧ್ರಪ್ರದೇಶ ಮೂಲದ ರವಿತೇಜ, ವೆಂಕಟೇಶ್‌, ಬಾಲರಾಜು, ಪೆದ್ದರಾಜು, ರಮೇಶ್‌ ಮತ್ತು ಸಾಯಿಕುಮಾರ್‌ ಬಂಧಿತರು. ಆರೋಪಿಗಳಿಂದ 30 ಲಕ್ಷ ರೂ. ಮೌಲ್ಯದ 107 ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿದೆ.

ಏ.4ರಂದು ವ್ಯಕ್ತಿಯೊಬ್ಬರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ ಮೊಬೈಲ್‌ ಕಳ್ಳತನ ವಾಗಿತ್ತು. ಈ ಬಗ್ಗೆ ಅವರು ವೈಟ್‌ μàಲ್ಡ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಚರಣೆ ನಡೆಸಿ ಆಂಧ್ರಪ್ರದೇಶದ 6 ಮಂದಿಯನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿ, ದೂರು ನೀಡಿದ್ದ ವ್ಯಕ್ತಿಯ ಮೊಬೈಲ್‌ ಫೋನ್‌ ಸೇರಿದಂತೆ ಒಟ್ಟು 3 ಮೊಬೈಲ್‌ ಫೋನ್‌ ಗಳನ್ನು ವಶಪಡಿಸಿಕೊಂಡಿದ್ದರು.

ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ 10 ದಿನಗಳ ಕಾಲ ಪೊಲೀಸ್‌ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಆ ವೇಳೆ ಆರೋಪಿಗಳು ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಚೆನ್ನಸಂದ್ರದಲ್ಲಿ ಒಂದು ಬಾಡಿಗೆ ರೂಮ್‌ ಮಾಡಿಕೊಂಡಿರುವುದು ಗೊತ್ತಾಗಿದೆ. ನಂತರ ಆ ರೂಮನ್ನು ಪರಿಶೀಲಿಸಿದಾಗ ಬರೋಬ್ಬರಿ 80ಕ್ಕೂ ಹೆಚ್ಚಿನ ಕಂಪನಿಯ ಕದ್ದ ಮೊಬೈಲ್‌ ಫೋನ್‌ ಗಳನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಗೊತ್ತಾಗಿದೆ. ಅವುಗಳನ್ನು ಅಂತಾರಾಜ್ಯ ಬಸ್‌ಗಳ ಮೂಲಕ ಹೊರರಾಜ್ಯಕ್ಕೆ ತೆಗೆದುಕೊಂಡು ಹೋಗಿ, ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂಬುದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular