Sunday, June 8, 2025
Google search engine

Homeಅಪರಾಧಬೆಂಗಳೂರು: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವೀನ್ (30) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಮೃತ ನವೀನ್ ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ನವೀನ್​ ಇಂದು (ಏ.12) ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ.

ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಇನ್ನು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

RELATED ARTICLES
- Advertisment -
Google search engine

Most Popular