Wednesday, July 16, 2025
Google search engine

Homeಅಪರಾಧಬೆಂಗಳೂರು ಪೈಶಾಚಿಕ ಘಟನೆ: ಪಕ್ಕದ ಮನೆಯ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

ಬೆಂಗಳೂರು ಪೈಶಾಚಿಕ ಘಟನೆ: ಪಕ್ಕದ ಮನೆಯ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪಕ್ಕದ ಮನೆಯಲ್ಲಿದ್ದ ಬಾಲಕಿಯನ್ನು ಮಾತನಾಡುವ ನೆನಪಲ್ಲಿ ಮನೆಗೆ ಕರೆಸಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ದೀಪು (26) ಎಂದು ತಿಳಿದುಬಂದಿದೆ.

ಆರೋಪಿಯು ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಪಕ್ಕದ ಮನೆಯವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಾದನಾಯಕನಹಳ್ಳಿ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಆರೋಪಿ ದೀಪು ಬಾಲಕಿಯ ಮನೆಯ ಪಕ್ಕದಲ್ಲೇ ವಾಸಗಿದ್ದು, ರಾತ್ರಿ ವೇಳೆ ಬೆಂಗಳೂರಿನಲ್ಲಿ ಆಟೋ ಓಡಿಸಿ ಬೆಳಿಗ್ಗೆ ಮನೆಯಲ್ಲೆ ಇರುತ್ತಿದ್ದ. ಬಾಲಕಿ ಪಕ್ಕದ ಮನೆಯವಳಾಗಿದ್ದರಿಂದ ಪರಿಚಯ ಮಾಡಿಕೊಂಡಿದ್ದ ಆರೋಪಿ 4 ತಿಂಗಳ ಹಿಂದೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಕೃತ್ಯವೆಸಗಿದ್ದಾನೆ.

ಅಲ್ಲದೇ 3-4 ಬಾರಿ ಆತನ ಮನೆಗೆ ಕರೆಸಿಕೊಂಡು ಬಾಲಕಿಯ ವಿರೋಧದ ನಡುವೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ, ಆರೋಪಿ ದೀಪು ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

RELATED ARTICLES
- Advertisment -
Google search engine

Most Popular