Wednesday, June 11, 2025
Google search engine

Homeರಾಜಕೀಯಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ?: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ.?

ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ?: ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ.?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಖಾತೆ ಬದಲಾಣೆ ಸೇರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಕರೆ ನೀಡಿರುವ ಬೆನ್ನಲೇ ಸಚಿವ ಸತೀಶ್ ಜಾರಕಿಹೊಳಿಗೂ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿಯ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಏಕೆ ಹೋಗಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಪಕ್ಷದ ಹೈಕಮಾಂಡ್‌ಗೆ ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ನೀಡಲು ಹೋಗಿರಬಹುದು. ಪಕ್ಷದ ಹೈಕಮಾಂಡ್ ನನಗೆ ಕರೆ ಮಾಡಿಲ್ಲ. ಅವರು ಕರೆ ಮಾಡಿದರೆ, ನಾನು ಕೂಡ ಹೋಗುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರಿನ ಕಾಲ್ತುಳಿತದ ಬಗ್ಗೆ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರು “ಕಾಲ್ತುಳಿತದ ವಿಷಯದ ಕುರಿತು ನಿನ್ನೆ ಸಭೆ ನಡೆಸಲಾಯಿತು. ನಾವು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಬೇಕಾಗಿದೆ. ಸರ್ಕಾರದ ಪರವಾಗಿ ಏನು ತಿಳಿಸಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular