ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ರಸ್ತೆಯಲ್ಲಿಯೇ ಮಾರಕಾಯಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ರಾಜ್ಯ ಸರ್ಕಾರ ಇದೀಗ ಅರ್ಜಿ ಸಲ್ಲಿಸಿದೆ.
ಈ ವೇಳೆ ಭೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಪೊಲೀಸರು ಕೋಕಾ ಕಾಯಿದೆ ಹಾಕಿದ್ದಾರೆ. ಸಂಘಟಿತ ಅಪರಾಧಕ್ಕೆ ಮಾತ್ರ ಕೋಕ ಕಾಯ್ದೆ ಹಾಕಬಹುದು. ಕೋಕ ಕಾಯಿದೆಯ ಅಡಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲ. ಮಧ್ಯಂತರ ರಕ್ಷಣೆ ತೆರೆವುಗೊಳಿಸಿದರೆ ನಿರೀಕ್ಷಣ ಜಾಮೀನಿಗೂ ಅವಕಾಶ ಇಲ್ಲ. ರಾಜಕೀಯ ದ್ವೇಷದಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ವತಂತ್ರ ನಿಖಾ ಸಂಸ್ಥೆಯಿಂದ ತನಿಖೆ ಕೋರಲು ಚಿಂತಿಸುತ್ತಿದ್ದೇವೆ. ಹೀಗಾಗಿ ಮಧ್ಯಂತರ ರಕ್ಷಣೆ ತೆರವುಗೊಳಿಸಿದಂತೆ ಮನವಿ ಮಾಡಿದರು.
ಭೈರತಿ ಬಸವರಾಜ್ ಪರ ವಕೀಲರ ವಾದಕೆ ಎಸ್ ಪಿ ಪಿ ಬಿ ಎನ್ ಜಗದೀಶ್ ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆಗೆ ಹಾಜರಾದ ವೇಳೆ ಭೈರತಿ ಬಸವರಾಜ್ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಬೈರತಿ ಬಸವರಾಜ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ. ಈ ಪ್ರಕರಣದಲ್ಲಿ ಹಲವು ಸಾಕ್ಷಗಳನ್ನು ಸಂಗ್ರಹಿಸಲಾಗಿದೆ. ಸಾಕ್ಷಿಗಳ ಆಧಾರ ಕೋರ್ಟಿಗೆ ತೃಪ್ತಿ ತರದಿದ್ದರೆ ಕೇಸ್ ರದ್ದು ಪಡಿಸಬಹುದು.
ಆದರೆ ಭರತಿ ಬಸವರಾಜ್ ವಿರುದ್ಧ ಗಂಭೀರವಾದ ಸಾಕ್ಷಿಗಳಿವೆ ಎಂದು ಪ್ರಾಜಿಕ್ಯೂಶನ್ ಪರವಾಗಿ ಎಸ್ ಪಿ ಪಿ ಬಿ ಏನ್ ಜಗದೀಶ್ ವಾದ ಮಂಡಿಸಿದರು. ಈ ವೇಳೆ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 23ಕ್ಕೆ ನಿಗದಿಪಡಿಸಿತು. ಅಲ್ಲಿಯವರೆಗೆ ಬಂಧನದಿಂದ ರಕ್ಷಣೆ ಮುಂದುವರಿಸುವಂತೆ ಹೈಕೋರ್ಟ್ ಸೂಚನೆ ನೀಡಿತು. ತನಿಖಾ ಸಂಸ್ಥೆಗಳನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡಬೇಕು ಎಂದು ನ್ಯಾಯಮೂರ್ತಿ ಸುನಿಲ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.