ಭುವನೇಶ್ವರ: ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಇಂದು ಭುವನೇಶ್ವರದಲ್ಲಿ ನಡೆದ ಪಕ್ಷದ ‘ಸಂವಿಧಾನ ಬಚಾವೋ ಸಮಾವೇಶ’ವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈ ಬಿಡಲು ಪ್ರಯತ್ನಿಸುತ್ತಿದೆ. ದಲಿತರು, ಬುಡಕಟ್ಟು ಜನಾಂಗದವರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕಲಿ ಯದಿದ್ದರೆ ಬಿಜೆಪಿ ಅವರನ್ನು ನಾಶಮಾಡುತ್ತದೆ ಎಂದು ಖರ್ಗೆ ಕಳವಳವ್ಯಕ್ತಪಡಿಸಿದರು.
ಬಿಜೆಪಿ ಆಡಳಿತದಲ್ಲಿ ದೇಶದ ದಲಿತರು, ಬುಡಕಟ್ಟು ಜನಾಂಗದವರು ಮತ್ತು ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡುವುದು ಅನಿವಾರ್ಯವಾಗಿದೆ. ಒಡಿಶಾದಲ್ಲಿ ಬಿಜೆಪಿ ಬೆಂಬಲಿಗರು, ದಲಿತರು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ಸರ್ಕಾರದ ಅವಧಿಯಲ್ಲಿ ದೇಶದಲ್ಲಿ 160 ಸಾರ್ವಜನಿಕ ಉದ್ದಿಮೆಗಳನ್ನುಸ್ಥಾಪಿಸಿತ್ತು. ಆದರೆ, ಬಿಜೆಪಿ ಸರ್ಕಾರವು ಅವುಗಳಲ್ಲಿ 23 ಉದ್ದಿಮೆಗಳನ್ನು ಖಾಸಗೀಕರಣಗೊಳಿಸಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.