Thursday, May 22, 2025
Google search engine

Homeಸ್ಥಳೀಯಕಾವೇರಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ : ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿಯು ತಮಿಳುನಾಡಿಗೆ ೧೮ ದಿನಗಳಲ್ಲಿ ೩ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹನೂರು ತಾಲೂಕಿನ ಮಾದಪ್ಪನ ಸನ್ನಿಧಾನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಈಗಾಗಲೇ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟನೆ ನೀಡಿದರು. ಬಳಿಕ, ಕಾವೇರಿ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಕಿಡಿಕಾರಿದರು.

ಚಾಮರಾಜನಗರಕ್ಕೆ ಅಂಟಿದ ಮೌಢ್ಯವನ್ನು ತೊಡೆದು ಹಾಕಿದ್ದೇನೆ. ಕಳೆದ ಬಾರಿ ೧೨ ಸಲ ಭೇಟಿ ನೀಡಿ ೫ ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ. ಇಂದು ಕೆಡಿಪಿ ಸಭೆ ನಡೆಸಲಿದ್ದೇನೆ. ಹಾಗೆಯೇ, ತೀವ್ರ ಬರಗಾಲ ಉಂಟಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ದೇವರ ಮೊರೆ ಹೋಗಿದ್ದೇನೆ. ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಾದಪ್ಪನ ಮೇಲೆ ನನಗೆ ನಂಬಿಕೆ ಇದೆ. ಉತ್ತಮ ಮಳೆ ಬೀಳುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರು ಹಂಚಿಕೆ ವಿಚಾರವಾಗಿ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, “ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ ತಮಿಳುನಾಡಿಗೆ ಇನ್ನೂ ೧೮ ದಿನಗಳ ಕಾಲ ನಿತ್ಯವೂ ೩,೦೦೦ ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣ ಶಾಸನ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

೧೮ ದಿನಗಳ ಕಾಲ ೩,೦೦೦ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಶಿಫಾರಸು ಮಾಡಿದೆ. ನಿನ್ನೆ ನಡೆದ ಅWಖಅ ಸಭೆಯಲ್ಲಿ ಉಭಯ ರಾಜ್ಯಗಳ ವಾದ ಆಲಿಸಿ ತಮಿಳುನಾಡಿಗೆ ೩,೦೦೦ ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಶಿಫಾರಸು ಮಾಡಿದೆ. ಈ ಮೂಲಕ ಈಗಾಗಲೇ ನೀರಿಲ್ಲದೆ ಬರಿದಾಗಿರುವ ರಾಜ್ಯಕ್ಕೆ ಸಮಿತಿಯು ಗಾಯದ ಮೇಲೆ ಬರೆ ಎಳೆದಿದೆ ಎಂಬುದು ರಾಜ್ಯದ ಜನರ ಆಕ್ರೋಶ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರವು ೧೩.೦೯.೨೦೨೩ ರಂದು ಹೊರಡಿಸಿದ ನೂತನ ಆದೇಶದಲ್ಲಿ ರಾಜ್ಯದ ೧೬೧ ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು ೩೪ ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ.

RELATED ARTICLES
- Advertisment -
Google search engine

Most Popular