Thursday, May 22, 2025
Google search engine

Homeರಾಜಕೀಯಜಗದೀಶ್ ಶೆಟ್ಟರ್‌ಗೆ ಬಿಜೆಪಿ ಖೆಡ್ಡಾ

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಖೆಡ್ಡಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಬಿಜೆಪಿ ಖೆಡ್ಡಾ ತೋಡಿದೆ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ನಂತರ ಪುನಃ ಬಿಜೆಪಿಗೆ ಹೋಗಿದ್ದಾರೆ. ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿ ಹರಕೆಯ ಕುರಿ ಮಾಡಿ, ಯಾವ ರೀತಿ ಬಲಿ ಕೊಡಬೇಕೆಂದು ವ್ಯವಸ್ಥಿತವಾಗಿ ಬಿಜೆಪಿ ಯೋಜನೆ ಸಿದ್ಧಪಡಿಸಿದೆ ಎಂದರು.

ಜಗದೀಶ್ ಶೆಟ್ಟರ್ ರನ್ನು ಉದ್ದೇಶಪೂರ್ವಕವಾಗಿ ಬೆಳಗಾವಿ ಕರೆತಂದು ಸೋಲಿಸುವ ಪ್ರಯತ್ನ ಬಿಜೆಪಿ ನಾಯಕರಿಂದ ನಡೆಯುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ತನಗೆ ಟಿಕೆಟ್ ಸಿಗಲಿಲ್ಲ ಎಂದು ಅವರು ಹೇಳಿಕೆಯೂ ನೀಡಬಾರದು? ಚುನಾವಣೆಯಲ್ಲಿ ಗೆಲುವು ಸಾಧಿಸಬಾರದು? ಸೋತು ಮನೆಯಲ್ಲಿ ಕೂರುವಂತೆ ಮಾಡುವುದು ಬಿಜೆಪಿಯ ಯೋಜನೆಯಾಗಿದೆ ಎಂದು ಅವರು ಹೇಳಿದರು. ಬಿಜೆಪಿ ಅಧೋಗತಿಗೆ ಹೋಗುವ ಸಮಯ ಬಂದಿದೆ. ನಾನು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೇ ಈ ಮಾತನ್ನು ಹೇಳಿದ್ದೆ. ಇವತ್ತು ಸದಾನಂದಗೌಡ, ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಯಾವ ರೀತಿ ನಡೆಸಿಕೊಂಡಿದೆ. ಹಿರಿಯರು, ಅನುಭವಿಗಳು ಹಾಗೂ ಪಕ್ಷಕ್ಕಾಗಿ ದುಡಿದವರು ಅವರಿಗೆ ಬೇಕಿಲ್ಲ ಎಂದು ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular