Wednesday, May 21, 2025
Google search engine

Homeರಾಜ್ಯಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹ: ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ (೯೭) ಅವರ ಆರೋಗ್ಯ ನಿನ್ನೆ ತಡರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ ೯೭ ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಜುಲೈ ನಂತರ ಅವರನ್ನು ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.

ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗೃಹ ಸಚಿವರಾಗಿ ಮತ್ತು ನಂತರ ೧೯೯೯ ಮತ್ತು ೨೦೦೪ ರ ನಡುವೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

RELATED ARTICLES
- Advertisment -
Google search engine

Most Popular