Friday, October 3, 2025
Google search engine

Homeರಾಜ್ಯಸುದ್ದಿಜಾಲಬಿಜೆಪಿ ಮುಖಂಡನ ಪುತ್ರನಿಂದ ವಂಚನೆ ಕೇಸ್ : ನ್ಯಾಯಕ್ಕಾಗಿ ಧರಣಿಯ ಎಚ್ಚರಿಕೆ

ಬಿಜೆಪಿ ಮುಖಂಡನ ಪುತ್ರನಿಂದ ವಂಚನೆ ಕೇಸ್ : ನ್ಯಾಯಕ್ಕಾಗಿ ಧರಣಿಯ ಎಚ್ಚರಿಕೆ

ಮಂಗಳೂರು (ದಕ್ಷಿಣ ಕನ್ನಡ) : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವಿದ್ಯಾರ್ಥಿನಿಗೆ ಜನಿಸಿದ ಮಗು ಬಿಜೆಪಿ ಮುಖಂಡನ‌ ಪುತ್ರ ಕೃಷ್ಣ ರಾವ್ ಎಂಬಾತನದ್ದೇ ಎಂದು ಡಿಎನ್ ಎ ಪರೀಕ್ಷೆಯಲ್ಲಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆತ ಮಗುವಿನ ತಾಯಿಯನ್ನು ಇನ್ನಾದರೂ ವಿವಾಹ ಆಗಲೇಬೇಕು. ತಪ್ಪಿದಲ್ಲಿ ಆತನ ಮನೆಯಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನ್ಯಾಯಕ್ಕಾಗಿ ಧರಣಿ ನಡೆಸುವುದಾಗಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣ ರಾವ್ ಒಪ್ಪಿದಲ್ಲಿ ಆತನ ಜೊತೆ ಯುವತಿಯ ವಿವಾಹವನ್ನು ನಾನೇ ಸ್ವಂತ ಖರ್ಚಿನಲ್ಲಿ ಮಾಡಿಸುತ್ತೇನೆ. ಪ್ರೀತಿ, ಪ್ರೇಮದ ಹೆಸರಲ್ಲಿ ಲೈಂಗಿಕ ಚಟುವಟಿಕೆ ನಡೆಸಿ, ಬಳಿಕ ಅರ್ಧದಲ್ಲೇ ಕೈಬಿಡುವ ಘಟನೆಗಳು ಮರುಕಳಿಸಬಾರದು. ಇದೊಂದು ಜಿಲ್ಲೆಗೆ ಕಪ್ಪು ಚುಕ್ಕೆ. ಹಾಗಾಗಿ ಈ ಘಟನೆ ಪ್ರೀತಿಸಿ, ಮಗು ಕರುಣಿಸಿ ಯುವತಿಯ ಬಾಳನ್ನು ಅರ್ಧಕ್ಕೇ ಕೈಬಿಡುವವರಿಗೆ ಒಂದು ಪಾಠವಾಗಬೇಕು ಎಂದರು.

ಸದ್ಯ ಜಾಮೀನಿನಲ್ಲಿರುವ ಕೃಷ್ಣ ರಾವ್ ಕೋರ್ಟ್ ನಲ್ಲಿ ವಿಚಾರಣೆ ವೇಳೆ ನೀಡುವ ಹೇಳಿಕೆಯನ್ನು ಆಧರಿಸಿ ಮುಂದೆ ಹೋರಾಟದ ರೂಪುರೇಷೆ ಹಾಕಿಕೊಳ್ಳಲಾಗುವುದು. ಸಂತ್ರಸ್ತೆಗೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಹಿಂದೂಗಳು ಹತ್ತು ಹತ್ತು ಮಕ್ಕಳನ್ನು ಹೆರುವಂತೆ ಭಾಷಣ ಮಾಡುವ ಹಿಂದುತ್ವ ಮುಖಂಡರು ಇದೀಗ ಹಿಂದೂ ಯುವಕನೊಬ್ಬ ಹಿಂದೂ ಯುವತಿಗೆ ಮಗು ಕರುಣಿಸಿದ ಪ್ರಕರಣದಲ್ಲಿ ಮಾತನಾಡುತ್ತಿಲ್ಲ. ಅನ್ಯಾಯಕ್ಕೊಳಗಾದ ಯುವತಿಗೆ ನ್ಯಾಯ ದೊರಕಿಸುತ್ತಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಾ ಕುಳಾಯಿ, ಯಾವುದೇ ತಪ್ಪು ಮಾಡದ ಆ ಮಗುವಿನ ಭವಿಷ್ಯದ ಬಗ್ಗೆ ಆಲೋಚಿಸಬೇಕಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತೆಯ ತಾಯಿ ನಮಿತಾ, ಸಮುದಾಯದ ಕಾರ್ಯಕರ್ತೆ ಅರ್ಚನಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular