Saturday, September 13, 2025
Google search engine

Homeಅಪರಾಧಬಿಜೆಪಿ ಶಾಸಕ ಪ್ರಭು ಚೌವ್ಹಾಣ್‌ಗೆ ಅಶ್ಲೀಲ ವೀಡಿಯೋ ಕಳುಹಿಸಿ ಬ್ಲ್ಯಾಕ್‌ಮೇಲ್: ಆರೋಪಿಯ ಬಂಧನ

ಬಿಜೆಪಿ ಶಾಸಕ ಪ್ರಭು ಚೌವ್ಹಾಣ್‌ಗೆ ಅಶ್ಲೀಲ ವೀಡಿಯೋ ಕಳುಹಿಸಿ ಬ್ಲ್ಯಾಕ್‌ಮೇಲ್: ಆರೋಪಿಯ ಬಂಧನ

ಬೀದರ್: ಜಿಲ್ಲೆಯ ಬಿಜೆಪಿ ಶಾಸಕ, ಮಾಜಿ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಅಶ್ಲೀಲ ವೀಡಿಯೋ ಕಳುಹಿಸಿ, 30 ಸಾವಿರ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಪೊಲೀಸರಿಗೆ ಅವರು ದೂರು ನೀಡಿದ್ದರು. ಈ ದೂರು ಆಧರಿಸಿ ಬೀದರ್ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೀದರ್ ನಂದಿಬಿಜಲಗಾಂವ್ ತಾಂಡಾದ ನಿವಾಸಿ ವಿಕಾಸ್ ಪವಾರ್ ಎಂಬುದಾಗಿ ಗುರುತಿಸಲಾಗಿದೆ. ಆರೋಪಿಯನ್ನು ಬೀದರ್ ಪೊಲೀಸರು ಹೈದರಾಬಾದಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿಕಾಸ್, ಮಾಜಿ ಸಚಿವ ಪ್ರಭು ಚೌವ್ಹಾಣ್ ಹಾಗೂ ಯುವತಿಯೊಬ್ಬಳ ಪೋಟೋ ಇರುವಂತ ಎಡಿಟೆಡ್ ವೀಡಿಯೋ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದರು. ಹಣ ನೀಡದೇ ಇದ್ದರೇ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹರಿಬಿಡೋದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿ ವಿಕಾಸ್ ಬಂಧಿಸಿ ಜೈಲಿಗಟ್ಟಲಾಗಿದೆ.

RELATED ARTICLES
- Advertisment -
Google search engine

Most Popular