Thursday, May 22, 2025
Google search engine

HomeUncategorizedರಾಷ್ಟ್ರೀಯಗುಜರಾತ್ ​ನ ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್ ​ನ ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್: ಗುಜರಾತ್ ​ನ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶೇಖರಣಾ ಟ್ಯಾಂಕರ್‌ ನಲ್ಲಿ ಸ್ಫೋಟ ಸಂಭವಿಸಿದ ನಂತರ ಗುಜರಾತ್‌ ನ ಸೂರತ್ ನಗರದ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಾರ್ಖಾನೆಯ ರಾಸಾಯನಿಕ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular