ಬೆಂಗಳೂರು: ವೇತನ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಫೈಟ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾರಿಗೆ ನೌಕರರು, ಮೇ 20 ರಿಂದ ಅನಿರ್ಧಿಷ್ಟಾವದಿ ಮುಷ್ಕರದ ತಯಾರಿ ಜೊತೆಗೆ ಸರ್ಕಾರದ ಸಾಧನ ಸಮಾವೇಶಕ್ಕೂ ಹೋರಾಟದ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಹೊತ್ತಿನಲ್ಲೇ ಬಿಎಂಟಿಸಿ (BMTC) ನೌಕರರಿಗೆ ಇಲಾಖೆ ಗುಡ್‌ನ್ಯೂಸ್ ಕೊಟ್ಟಿದೆ.
11 ತಿಂಗಳ ಹಿಂಬಾಕಿ (ಅರಿಯರ್ಸ್) ವೇತನವನ್ನು ಬಿಎಂಟಿಸಿ ನೌಕರರ ಖಾತೆಗೆ ಸಾರಿಗೆ ಇಲಾಖೆ ಜಮೆ ಮಾಡಿದೆ. ರಾಜ್ಯ ಸರ್ಕಾರ 4 ನಿಗಮಗಳ ಸಾರಿಗೆ ನೌಕರರಿಗೆ 26 ತಿಂಗಳ ಹಿಂಬಾಕಿ ನೀಡಲು ನೀಡಲು ಇತ್ತೀಚೆಗೆ ಒಪ್ಪಿಕೊಂಡಿತ್ತು. ಅದರಂತೆ ಮೊದಲ ಹಂತದಲ್ಲಿ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿತ್ತು. ಹೀಗಾಗಿ ಇಂದು 11 ತಿಂಗಳ ಹಿಂಬಾಕಿ ಹಣವನ್ನ ಬಿಡುಗಡೆ ಮಾಡಿದ್ದು, ಬಿಎಂಟಿಸಿ ನೌಕರರಿ ಖಾತೆಗೆ ಜಮೆ ಮಾಡಲಾಗಿದೆ.
ಉಳಿದ 3 ನಿಗಮಗಳ ನೌಕರರಿಗೂ ಹಿಂಬಾಕಿ ಹಣ ಪಾವತಿಯಾಗಿದೆ. ಇನ್ನೂ 15 ತಿಂಗಳ ಹಿಂಬಾಕಿಯನ್ನ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿದೆ.



