ಬೆಂಗಳೂರು : ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್ ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು.
ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು ಇಮೇಲ್ ಬೆದರಿಕೆ ಸಂದೇಶ ಬಂದಿದೆ, ಹಲಸೂರು ಸಮೀಪ ಇರುವ ಗುರು ಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಋಷಿಪಾಲ್ ಸಿಂಗ್ ದೂರು ಆಧರಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.