Saturday, May 24, 2025
Google search engine

Homeರಾಜ್ಯಬಿ.ಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣ: ರಾಜಕೀಯ ವೈಷಮ್ಯ ಎಂದ ಸಚಿವ ಪ್ರಲ್ಹಾದ್ ಜೋಶಿ

ಬಿ.ಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣ: ರಾಜಕೀಯ ವೈಷಮ್ಯ ಎಂದ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದು ರಾಜಕೀಯ ವೈಶಮ್ಯ ಎಂದು ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಪ್ರಲ್ಹಾದ್ ಜೋಶಿ, ಲೋಕಸಭೆ ಚುನಾವಣೆ ೨೦೨೪ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ ೬೦ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ ಎಂದು ಅವರ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ ೮೧ ವರ್ಷದ ಬಿಜೆಪಿ ವರಿಷ್ಠರಾದ ಬಿಎಸ್ ಯಡಿಯೂರಪ್ಪ ಅವರ ಮೇಲೆ ಈ ಇಲ್ಲಸಲ್ಲದ ಪ್ರಕರಣ ಎಳೆಯುತ್ತಿರುವುದು ರಾಜಕೀಯ ವೈಷಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದು ವಾಗ್ದಾಳಿ ಮಾಡಿದರು.

RELATED ARTICLES
- Advertisment -
Google search engine

Most Popular