Saturday, May 9, 2026
Google search engine

Homeಸ್ಥಳೀಯಲಕ್ಷಾಂತರ ಅಭಿಮಾನಿಗಳ ನಡುವೆ ಇಂದು ಬಿಎಸ್ ವೈ ಅಭಿಮಾನೋತ್ಸವ

ಲಕ್ಷಾಂತರ ಅಭಿಮಾನಿಗಳ ನಡುವೆ ಇಂದು ಬಿಎಸ್ ವೈ ಅಭಿಮಾನೋತ್ಸವ

ಚಿತ್ರದುರ್ಗ : ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ.

ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು  ‘ ಬಿಎಸ್ ವೈ ಅಭಿಮಾನೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು  ಕಾರ್ಯಕ್ರಮಕ್ಕೆ ಜಮಾಯಿಸಿದ್ದಾರೆ.

ಇಂದು ಮಧ್ಯಾಹ್ಮ 3 ಗಂಟೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು ಬಿಎಸ್ ವೈ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ. ಎಸ್ ಯಡಿಯೂರಪ್ಪ ಅವರು ತಮ್ಮ ಆರಂಭಿಕ ರಾಜಕೀಯ ದಿನಗಳಲ್ಲಿ ಬಳಸುತ್ತಿದ್ದ ಅಂಬಾಸಿಡರ್ ಕಾರು ಪ್ರದರ್ಶನಕ್ಕೆ ಇಟ್ಟಿರುವುದು ಪ್ರಮುಖ ಆಕರ್ಷಣೆಯಾಗಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ನಿರೀಕ್ಷೆಯಿದ್ದು, ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ.

RELATED ARTICLES
- Advertisment -
Google search engine

Most Popular