Friday, March 6, 2026
Google search engine

Homeರಾಜಕೀಯಬಜೆಟ್ 2026-27: ಸಿಎಂ ತವರು ಮೈಸೂರು ಜಿಲ್ಲೆಗೆ ಕೊಡುಗೆ

ಬಜೆಟ್ 2026-27: ಸಿಎಂ ತವರು ಮೈಸೂರು ಜಿಲ್ಲೆಗೆ ಕೊಡುಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದು, ತಾಂಡವಪುರದಲ್ಲಿ ‘ಸಿಲ್ಕ್ ಪಾರ್ಕ್‌’, ಲಿಂಗಾಂಬುಧಿ ಸಸ್ಯತೋಟ ಅಭಿವೃದ್ಧಿ, ಜಯದೇವ ಆಸ್ಪತ್ರೆ ಮೇಲ್ದರ್ಜೆಗೆ ಸೇರಿದಂತೆ ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

ಲಿಂಗಾಂಬುಧಿ ಸಸ್ಯತೋಟ ಅಭಿವೃದ್ಧಿ, ಸಿಲ್ಕ್ ಪಾರ್ಕ್‌ : ಹೆಚ್ಚಿನ ಪ್ರವಾಸಿಗರು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರು ನಗರದ ಲಿಂಗಾಂಬುಧಿ ಸಸ್ಯತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಆದರೆ, ಇದಕ್ಕೆ ನೀಡಲಾಗುವ ಅನುದಾನದ ಬಗ್ಗೆ ಉಲ್ಲೇಖವಿಲ್ಲ.

‘ಸಿಲ್ಕ್ ಪಾರ್ಕ್’, ಬೋಯರ್’ ಮೇಕೆ ತಳಿ ಸಂವರ್ಧನಾ ಕೇಂದ್ರ : ನಂಜನಗೂಡು ತಾಲೂಕಿನ ತಾಂಡವಪುರದಲ್ಲಿ ‘ಸಿಲ್ಕ್ ಪಾರ್ಕ್’ ಸ್ಥಾಪನೆ ಬಗ್ಗೆ ಘೋಷಿಸಲಾಗಿದೆ. ಹಾಗೂ ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ‘ಬೋಯರ್’ ಮೇಕೆ ತಳಿ ಸಂವರ್ಧನಾ ಕೇಂದ್ರ ಮತ್ತು ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನಿಗಮದ ಅನುಪಯುಕ್ತ ಆಸ್ತಿಗಳನ್ನು ನಗದೀಕರಣಗೊಳಿಸಲು ಉದ್ದೇಶಿಸಿದ್ದು, ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಬಂಬೂಬಜಾರ್‌ನಲ್ಲಿರುವ ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ. ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಜಯದೇವ ಆಸ್ಪತ್ರೆ ಮೇಲ್ದರ್ಜೆಗೆ : ಇಲ್ಲಿನ ಜಯದೇವ ಆಸ್ಪತ್ರೆ ಮೇಲ್ದರ್ಜೆಗೇರಿಸುವುದಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದು, ಮೈಸೂರಿನ ಕೆ.ಆ‌ರ್.ಎಸ್. ರಸ್ತೆಯಲ್ಲಿರುವ, 400 ಹಾಸಿಗೆಗಳ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಕಟಿಸಿದೆ. ಇದರಿಂದ ಮೈಸೂರು ಜೊತೆಗೆ, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ರೋಗಿಗಳಿಗೆ ಅನುಕೂಲ ಆಗಲಿದೆ. ಪ್ರಸ್ತುತ, ಈ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದರಿಂದಾಗಿ ಹಾಸಿಗೆಗಳ ಸಾಮರ್ಥ್ಯ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.

ಮೈಸೂರು ರಾಜ್ಯದ 2ನೇ ಐಟಿ ಸಿಟಿ : ಮೈಸೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿದ್ದರಿಂದ 100 ಕಂಪನಿಗಳಲ್ಲಿ 30ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ದಟ್ಟಣೆ ಕಡಿಮೆ ಮಾಡಲು ಹಾಗೂ ವಿಕೇಂದ್ರೀಕೃತ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮೈಸೂರು ನಗರವನ್ನು ರಾಜ್ಯದ 2ನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಅಲ್ಲದೆ ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು ಕೆಐಎಡಿಬಿಯಿಂದ ವತಿಯಿಂದ ಅಭಿವೃದ್ಧಿಪಡಿಸಲಾಗುವುದು. ಹಾಗೂ ಮೈಸೂರಿನಲ್ಲಿ ಉದ್ಯಮಿಗಳಿಗೆ ಇನ್ಮುಬೇಸನ್ ಸೌಲಭ್ಯಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್-ಅಂಡ್-ಪ್ಲೇ ಸೌಲಭ್ಯದ ‘ಲೀಪ್ ಲ್ಯಾಬ್: ಸ್ಥಾಪಿಸಲಾಗುವುದು. ಮೈಸೂರಿನ ಕೆಲವು ಭಾಗಗಳಲ್ಲಿ ಯುಜಿಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮೈಸೂರಿನಲ್ಲಿ ಅಧುನಿಕ ಲ್ಯಾಂಡ್ರಿ : ಮೈಸೂರು ನಗರದಲ್ಲಿ ಆಧುನಿಕ ಲ್ಯಾಂಡ್ರಿ ನಿರ್ಮಿಸಿ ಮಡಿವಾಳ ಸಮಾಜದವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್‌ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಮೊದಲಾದ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ ₹ 75 ಲಕ್ಷ ವೆಚ್ಚದಲ್ಲಿ ಆದುನಿಕ ಛಾಂಡಿ ಸ್ಥಾಪನೆ ಮಾಡಲಾಗುವದು ಎಂದು ತಿಳಿಸಲಾಗಿದೆ.

ಹಾಸ್ಟೆಲ್‌ಗಳು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿದೆ. ಇದರಲ್ಲಿ ಮೈಸೂರಿಗೆ ಎಷ್ಟು ದೊರೆಯುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೇಡಿಕೆಯಿರುವ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿದೆ.

ಮೈಸೂರಿನಲ್ಲಿ ಪ್ರೈಡರ್ ಎಲೆಕ್ನಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ : ಮೈಸೂರಿನಲ್ಲಿ ಪ್ರೈಡರ್ ಎಲೆಕ್ನಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆಗೆ ಬಗ್ಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ್ದು, 16 ಕೋಟಿ ವೆಚ್ಚದಲ್ಲಿ ಈ ಕೇಂದ್ರ ಸ್ಥಾಪನೆಗೆ ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ ಎಂದು ತಿಳಿಸಲಾಗಿದೆ. ಇದಲ್ಲದೆ ಮೈಸೂರಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುವುದು ಎಂದು ಪ್ರಕಟಿಸಲಾಗಿದೆ.

‘ಕಾವಾ’ದಲ್ಲಿ ಕಲಾ ಗ್ಯಾಲರಿ ನಿರ್ಮಾಣ : ಮೈಸೂರುರಿನ ಸಿದ್ದಾರ್ಥನಗರದಲ್ಲಿರುವ ಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ(ಕಾವಾ) ಸಂಸ್ಥೆಯ ಆವರಣದಲ್ಲಿ ಸುಸಜ್ಜಿತ ಕಲಾ ಗ್ಯಾಲರಿ ಸಭಾಂಗಣ ನಿರ್ಮಾಣ, ಲ್ಯಾಂಡ್‌ಸ್ಕೆಪಿಂಗ್ ಶಿಲ್ಪಕಲಾ ಕೃತಿಗಳ ಪೆಡೆಸ್ಟಲ್‌ಗಳ ನಿರ್ಮಾಣ ಮೊದಲಾದ ಮೂಲಸೌಕರ್ಯಗಳನ್ನು ಕಲ್ಪಿಸಲು 2 ಕೋಟಿ ಒದಗಿಸಲಾಗುವುದು ಎಂದು 2026-27ನೇ ಸಾಲಿನ ಬಜೆಟ್‌ನಲ್ಲಿ ತಿಳಿಸಿದ್ದು, ಇನ್ನೂ ಇತರೆ ಘೋಷಣೆಗಳನ್ನೂ ಸಹ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular