Monday, May 26, 2025
Google search engine

HomeUncategorizedರಾಷ್ಟ್ರೀಯಬಜೆಟ್‌ ಅಧಿವೇಶನ ಆರಂಭ: ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಿ- ಪ್ರಧಾನಿ ಮೋದಿ

ಬಜೆಟ್‌ ಅಧಿವೇಶನ ಆರಂಭ: ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಿ- ಪ್ರಧಾನಿ ಮೋದಿ

ನವದೆಹಲಿ: ಏಪ್ರಿಲ್-ಮೇ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಲೋಕಸಭೆಯಲ್ಲಿ ಸೋಮವಾರದಿಂದ (ಜನವರಿ 31) ಬಜೆಟ್‌ ಅಧಿವೇಶನ ಆರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು.

ಬಜೆಟ್‌ ಅಧಿವೇಶನಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿಪಕ್ಷಗಳು ಲೋಕಸಭೆ ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು. ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶವಿದೆ. ಅಲ್ಲದೇ ಅಸಭ್ಯ ವರ್ತನೆ ತೋರುವ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು ಸರ್ಕಾರದ ಅಂತಿಮ ಮಧ್ಯಂತರ ಬಜೆಟ್‌ ಅನ್ನು ಮಂಡಿಸಲಿದ್ದಾರೆ.

ಸುಗಮ ಕಲಾಪಕ್ಕಾಗಿ, ಎಲ್ಲರ ಸಹಕಾರಕ್ಕಾಗಿ ಬಜೆಟ್‌ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿದ್ದ ಎಲ್ಲಾ ಸಂಸದರ ಅಮಾನತು ರದ್ದುಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಪೀಕರ್‌ ಮತ್ತು ರಾಜ್ಯಸಭೆ ಅಧ್ಯಕ್ಷರ ಜತೆ ಮಾತುಕತೆ ನಡೆಸಲಾಗಿದೆ. ಸಂಬಂಧಿತ ಸಮಿತಿಗಳ ಜೊತೆ ಚರ್ಚಿಸಿ, ಅಮಾನತು ರದ್ದುಗೊಳಿಸಿ ಸಂಸದರಿಗೆ ಸದನದ ಕಲಾಪದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ಜೋಶಿ ಈ ಸಂದರ್ಭದಲ್ಲಿ ತಿಳಿಸಿದರು.

RELATED ARTICLES
- Advertisment -
Google search engine

Most Popular