Monday, May 25, 2026
Google search engine

Homeರಾಜ್ಯಸುದ್ದಿಜಾಲಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ: ಇಕ್ಬಾಲ್ ಹುಸೇನ್

ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ: ಇಕ್ಬಾಲ್ ಹುಸೇನ್

ರಾಮನಗರ: ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರು ಅಭಿಪ್ರಾಯಪಟ್ಟರು.

ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಎನ್.ಸಿ.ಸಿ., ಎನ್.ಎಸ್.ಎಸ್, ರೆಡ್‌ಕ್ರಾಸ್, ರೆಡ್‌ರಿಬ್ಬನ್, ರೋವರ್ಸ್ ಮತ್ತು ರೇಂಜರ್ಸ್ ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಸಹಸ್ರಾರು ಜನ ಹುಟ್ಟುತ್ತಾರೆ, ಸಾಯುತ್ತಾರೆ, ಆದರೆ ಕೆಲವರು ಮಾತ್ರ ಇತಿಹಾಸದಲ್ಲಿ ಅಮರರಾಗಿರುತ್ತಾರೆ. ಒಂದು ಮಗುವಿಗೆ ಚೆನ್ನಾಗಿ ಅಕ್ಷರ ಕಲಿಸಿದರೆ ಅದೇ ನಿಜವಾದ ಪುಣ್ಯ, ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ವೇಳೆಯಲ್ಲಿ ಮೊಬೈಲ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು, ಅಗತ್ಯವಿದ್ದಾಗ ಮಾತ್ರ ಮೊಬೈಲ್ ಉಪಯೋಗಿಸಬೇಕು. ನಿಯಮಿತವಾಗಿ ಮಕ್ಕಳು ವ್ಯಾಯಾಮವನ್ನು ಅಭ್ಯಾಸ ಮಾಡಿದರೆ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಇದೇ ಸಂದರ್ಭದಲ್ಲಿ ಎನ್.ಸಿ.ಸಿ., ಎನ್.ಎಸ್.ಎಸ್ ರೆಡ್‌ಕ್ರಾಸ್, ರೆಡ್‌ರಿಬ್ಬನ್, ರೋವರ್ಸ್, ರೇಂಜರ್ಸ್, ಕುಸ್ತಿ ಹಾಗೂ ಹಗ್ಗಜಗ್ಗಾಟದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸನ್ಮಾನಿಸಲಾಯಿತು.

ಸಾಹಿತಿ, ರಂಗಕರ್ಮಿ ಹಾಗೂ ಜಾನಪದ ವಿದ್ವಾಂಸರಾದ ಡಾ. ಎಂ. ಬೈರೇಗೌಡ, ಸಮರ್ಥನಂ ಅಂಗವಿಕಲರ ಟ್ರಸ್ಟ್ ಸಂಸ್ಥಾಪಕರಾದ ಡಾ. ಮಹಾಂತೇಶ್ ಘಟಿವಾಳಪ್ಪ ಕಿವಡಸಣ್ಣವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ. ಲಕ್ಷ್ಮೀ ಟಿ., ಐ.ಕ್ಯೂ. ಎ.ಸಿ ಸಂಚಾಲಕರಾದ ಡಾ. ದೀಪ. ಆರ್ ಹೆಬ್ಬಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವಕುಮಾರ್, ರೆಡ್‌ಕ್ರಾಸ್ ಮತ್ತು ರೆಡ್‌ರಿಬ್ಬನ್ ಸಂಚಾಲಕರಾದ ಗಾಯತ್ರಿ ಸೇರಿದಂತೆ ಬೋಧಕ ಸಿಬ್ಬಂದಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular