ಮಂಗಳೂರು (ದಕ್ಷಿಣ ಕನ್ನಡ) : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಇಂದು ಬೆಳಗ್ಗಿನ ಜಾವದವರೆಗೂ ತಿಮರೋಡಿಯ ಮನೆಯಲ್ಲಿ ಈತನಿಗೆ ಸಂಬಂಧಿಸಿದ ವಸ್ತುಗಳ ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು.