Tuesday, May 20, 2025
Google search engine

HomeUncategorizedರಾಷ್ಟ್ರೀಯಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿದ ಬಸ್: ಐವರ ಸಾವು

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿದ ಬಸ್: ಐವರ ಸಾವು

ಒಡಿಶಾ:  ಪುರಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದ ಬಸ್​ ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗುರುಳಿದ್ದು, ಐವರು ಸಾವನ್ನಪ್ಪಿದ್ದು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಪ್ರಯಾಣಿಕರು ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ-16ರ ಬಾರಾಬತಿ ಸೇತುವೆ ಮೇಲೆ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರನ್ನು ಗುರುತಿಸುವ ಪ್ರಯತ್ನ ಮುಂದುವರಿದಿದೆ ಎಂದು ಎಸ್ಪಿ ವಿನೀತ್ ಅಗರ್ವಾಲ್ ತಿಳಿಸಿದ್ದಾರೆ.

38 ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಟಕ್‌ ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಈ ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸುವ ಜೊತೆಗೆ, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು. ಮೃತರ ಕುಟುಂಬಗಳಿಗೆ ಒಡಿಶಾ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ನೀಡಲಿದೆ.

ಅಪಘಾತಕ್ಕೀಡಾದ ಪ್ರಯಾಣಿಕರ ಬಸ್ ಪಶ್ಚಿಮ ಬಂಗಾಳದ ಹಲ್ದಿಯಾಕ್ಕೆ ಹೋಗುತ್ತಿತ್ತು ಎಂದು ಒಡಿಶಾ ಸಾರಿಗೆ ಆಯುಕ್ತ ಅಮಿತವ್ ಠಾಕೂರ್ ಹೇಳಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗಾಯಾಳುಗಳ ಸಹಾಯಕ್ಕಾಗಿ 16 ಆಂಬ್ಯುಲೆನ್ಸ್‌ ಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು.

ಸೇತುವೆಯಿಂದ ಬಿದ್ದ ಬಸ್ಸನ್ನು ಕ್ರೇನ್ ಸಹಾಯದಿಂದ ಮೇಲೆತ್ತಲಾಯಿತು. ರಕ್ಷಣಾ ಕಾರ್ಯಾಚರಣೆ ತಡರಾತ್ರಿ ಅಂತ್ಯಗೊಂಡಿದೆ. ಬಸ್‌ ನಿಂದ ಪ್ರಯಾಣಿಕರನ್ನು ಹೊರ ತೆಗೆಯಲು ಗ್ಯಾಸ್ ಕಟ್ಟರ್‌ ಗಳನ್ನು ಬಳಸಲಾಗಿದೆ ಎಂದು ಜಾಜ್‌ ಪುರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಖಿಲ್ ಪವನ್ ಕಲ್ಯಾಣ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular