ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.೧೩ರಂದು ಉಪ ಚುನಾವಣೆ ನಡೆಯಲಿದೆ. ಇಂದು ಸೋಮವಾರ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ತೆರೆ ಬಿದ್ದಿದೆ. ನಾಳೆಯಿಂದ ೨ ದಿನಗಳ ಕಾಲ ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ.
ರಾಜ್ಯದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.೧೩ರಂದು ಉಪ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರದಿಂದ ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಿ ಆದೇಶಿಸಿದೆ.
ಇಂದು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿತ್ತು. ರಾಜಕೀಯ ನಾಯಕರು ಅಬ್ಬರದ ಪ್ರಚಾರವನ್ನು ಮಾಡಿದರು. ಇದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆಯಿಂದ ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ. ನಾಳೆಯಿಂದ ರಾಜಕೀಯ ನಾಯಕರು ಎರಡು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ, ಕ್ಷೇತ್ರದ ಮತದಾರರಲ್ಲಿ ಮತಯಾಚನೆಯನ್ನು ಮಾಡಲಿದ್ದಾರೆ.