ಬಳ್ಳಾರಿ: ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ.
ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳೆಯರಿಗೆ ಮಾತ್ರ.
ಅರ್ಜಿಯನ್ನು ನಗರದ ಹೊಸಪೇಟೆ ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡದ ಸಿಡಾಕ್ ನ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಅಥವಾ ಮೊ.9449226221, 7483538942 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.