ರಾಮನಗರ: 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಗೆ ಶೇ.50ರಷ್ಟು ಅಥವಾ ಗರಿಷ್ಟ 3 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ಕಚೇರಿಯ ವೇಳೆಯಲ್ಲಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ರಾಮನಗರ ತಾಲ್ಲೂಕು ಮೊ: 9880347733, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚನ್ನಪಟ್ಟಣ ತಾಲ್ಲೂಕು ಮೊ: 9972127558, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕನಕಪುರ ತಾಲ್ಲೂಕು ಮೊ:8618277242 ಅಥವಾ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಗಡಿ ತಾಲ್ಲೂಕು ಮೊ: 9880347733 ಇವರನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.