Saturday, August 2, 2025
Google search engine

Homeರಾಜ್ಯಸುದ್ದಿಜಾಲಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ ದಿನಾಂಕ: 01-10-2025 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿ ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ಆಗಸ್ಟ್, 25 ರ ಸಂಜೆ 5 ಗಂಟೆಯೊಳಗೆ ಈ ಕಚೇರಿಗೆ ಸಲ್ಲಿಸುವಂತೆ ಕೋರಿದೆ. ತಡವಾಗಿ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-295829ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular