Saturday, June 7, 2025
Google search engine

Homeಸ್ಥಳೀಯಪಲ್ಸ್ ಪೋಲಿಯೋ ಯಶಸ್ವಿಗೆ ಕರೆ

ಪಲ್ಸ್ ಪೋಲಿಯೋ ಯಶಸ್ವಿಗೆ ಕರೆ

ರಾಮನಗರ: ಮಾರ್ಚ್-೦೩ ರಿಂದ ೦೬ ವರೆಗೆ ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ತಿಳಿಸಿದರು.

ಅವರು ಫೆ. ೨೮ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ – ೨೦೨೪ ರ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಮಾತನಾಡಿ, ಜಿಲ್ಲೆಯಲ್ಲಿ ೦-೫ ವರ್ಷದೊಳಗಿನ ಮಕ್ಕಳು ಚನ್ನಪಟ್ಟಣ-೧೯,೨೪೨, ಕನಕಪುರ-೨೨,೩೨೫, ಮಾಗಡಿ-೧೨,೬೩೪, ರಾಮನಗರ-೨೨,೧೨೧ ರಂತೆ ಒಟ್ಟು ೭೬,೩೨೨ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದು ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜು ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾರ್ಚ್-೦೩ ರಿಂದ ೦೬ ವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು ೧ನೇ ದಿನ ಬೂತ್‌ಗಳಲ್ಲಿ, ನಂತರದ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ೩ ದಿನ ಹಾಗೂ ನಗರ ಪ್ರದೇಶಗಳಲ್ಲಿ ೪ ದಿನಗಳವರೆಗೆ ಆರೋಗ್ಯ ಸಿಬ್ಬಂದಿ, ಆಶಾ -ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆ ಭೇಟಿ ಮಾಡಿ ಬೂತ್‌ಗಳಲ್ಲಿ ಲಸಿಕೆ ಪಡೆಯದೇ ಇರುವ ಮಕ್ಕಳನ್ನು ಗುರುತಿಸಿ ಅರ್ಹ ಮಕ್ಕಳಿಗೆ ಲಸಿಕೆ ನೀಡುತ್ತಾರೆ. ಜೊತೆಗೆ ರೈಲು, ಬಸ್ ನಿಲ್ದಾಣ, ವಲಸೆ ಜನರು ವಾಸಿಸುವ ಪ್ರದೇಶಗಳು, ಇಟ್ಟಿಗೆ ಮತ್ತು ಬ್ರಿಕ್ಸ್ ಫ್ಯಾಕ್ಟರಿ, ಮಾರುಕಟ್ಟೆ ಇನ್ನಿತರೆ ಪ್ರದೇಶಗಳಲ್ಲಿ ವಿಶೇಷ ತಂಡಗಳ ಮೂಲಕ ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು, ಪೋಷಕರು, ಸಂಘ ಸಂಸ್ಥೆಗಳು ಸಹಕರಿಸುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ರೋಟರಿ ಸಂಸ್ಥೆಯ ಅಧ್ಯಕ್ಷ ಕಾಂತರಾಜು, ಡಿ.ಪಿ.ಎಂ. ನಾಗೇಶ್, ಶಿಕ್ಷಣ ಇಲಾಖಾ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular