ಶಿರಸಿ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕುಮಟಾ ಶಿರಸಿ ಮಾರ್ಗದ ಹನ್ಮಂತಿ ಬಳಿ ನಡೆದಿದೆ.
ಬೈಕ್ ಸವಾರ ಮಂಜುಗುಣಿ ಕಲ್ಲಳ್ಳಿಯ ವಿನಾಯಕ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗಂಡ-ಹೆಂಡತಿ, ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.