Sunday, June 8, 2025
Google search engine

Homeಅಪರಾಧಶಿರಸಿ-ಕುಮಟಾ  ರಸ್ತೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ಮೇಲೆ ಹರಿದ ಕಾರು: ಐವರಿಗೆ ಗಾಯ

ಶಿರಸಿ-ಕುಮಟಾ  ರಸ್ತೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ಮೇಲೆ ಹರಿದ ಕಾರು: ಐವರಿಗೆ ಗಾಯ

ಉತ್ತರ ಕನ್ನಡ: ಜಿಲ್ಲೆಯ ಶಿರಸಿ-ಕುಮಟಾ  ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದಿದೆ.

ಘಟನೆಯಲ್ಲಿ ಓರ್ವ ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ.

ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular