ಬೆಂಗಳೂರು : ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಹೈಕೋರ್ಟ್ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿತು.
ವಿಚಾರಣೆಯ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಬಳಿಕ ವಿಚಾರಣೆಯನ್ನು ಎರಡನೇ ವಾರಕ್ಕೆ ಹೈಕೋರ್ಟ್ ಮುಂದೂಡಿದೆ. ಹೈಕೋರ್ಟ್ ಏಕ ಸದಸ್ಯ ಪೀಠ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿತ್ತು. ತೀರ್ಪು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇದೀಗ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.