Tuesday, July 15, 2025
Google search engine

Homeಅಪರಾಧಪುತ್ತೂರಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಪ್ರಕರಣ: ಆರೋಪಿ ಬಂಧನ

ಪುತ್ತೂರಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಪ್ರಕರಣ: ಆರೋಪಿ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ತಲವಾರು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಒಡ್ಡಿದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಬೊಳುವಾರು ಎಂಬಲ್ಲಿ ನಡೆದಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸರು ತಲವಾರು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹಾಸನ ಮೂಲದ ಪ್ರಸ್ತುತ ಬಂಟ್ವಾಳದಲ್ಲಿ ವಾಸ್ತವ್ಯವಿರುವ ರಾಜು (45) ಎಂದು ಗುರುತಿಸಲಾಗಿದೆ. ಆರೋಪಿ ರಾಜು ತಲವಾರು ಹಿಡಿದುಕೊಂಡು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪುತ್ತೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ. ಆತನ ವಿರುದ್ದ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular