Wednesday, August 6, 2025
Google search engine

Homeರಾಜ್ಯಸುದ್ದಿಜಾಲಹುಣಸೂರಿನಲ್ಲಿ ಬ್ಯೂಟಿಷಿಯನ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಹುಣಸೂರಿನಲ್ಲಿ ಬ್ಯೂಟಿಷಿಯನ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಹುಣಸೂರು: ತಾಲೂಕು ಪಂಚಾಯಿತಿಯ ಸಾಮರ್ಥಸೌಧ ಸಭಾಭವನದಲ್ಲಿ ನಡೆದ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಅಂಗಸಂಸ್ಥೆ ಆದಂತಹ ವಿವೇಕ ಗ್ರಾಮೀಣ ಜೀವನಾಧಾರ ಕೇಂದ್ರ ಹುಣಸೂರು, ರವರ ವತಿಯಿಂದ ನಡೆದ ಮೂರು ತಿಂಗಳ ಬ್ಯೂಟಿಷಿಯನ್ ಹಾಗೂ ಫ್ಯಾಶನ್ ಡಿಸೈನಿಂಗ್ ತರಬೇತಿಯನ್ನು ಪಡೆದುಕೊಂಡಂತಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಹೊಸದಾಗಿ ದಾಖಲಾದ ಅಭ್ಯರ್ಥಿಗಳಿಗೆ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಹುಣಸೂರು ನಗರಸಭೆಯ ಪೌರಯುಕ್ತರಾದ ಮಾನಸ ಎಂ ರವರು ಮಾತನಾಡಿ ಕೌಶಲ್ಯ ತರಬೇತಿಗಳು ಮಹಿಳೆಯರಿಗೆ ಸಾಕಷ್ಟು ಪ್ರಯೋಜನವಾಗಿದೆ ಮತ್ತು ಅದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಸಮಾಜಕಲ್ಯಾಣ ಇಲಾಖೆಯ ದ್ವಿತಿಯದರ್ಜೆ ಸಹಾಯಕರಾದ ಲೂಯಿಸ್ ಪೆರೇರ ಮಾತನಾಡಿ, ಮಹಿಳೆಯರಿಗೆ ಇಲಾಖೆಯಲ್ಲಿ ಸಿಗುವ ಸವಲತ್ತು ಗಳ ಬಗ್ಗೆ ತಿಳಿಸಿದರು ಮತ್ತು ಪ್ರಮಾಣಪತ್ರದ ಮಹತ್ವದ ಬಗ್ಗೆ ತಿಳಿಸಿದರು.

ನಂತರ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣ ಹಾಗೂ ನೀರು ನೈರ್ಮಲ್ಯ ಕಾರ್ಯಕ್ರಮದ ಮುಖ್ಯಸ್ಥರಾದ ಡಾ. ಡೆನ್ನಿಸ್ ಚೌಹಾಣ್ ರವರು ಮಹಿಳೆಯರು ಆರ್ಥಿಕ ಸ್ವಾವಲಂಬಿ ಆಗಿ ಬದುಕಲು ತರಬೇತಿಯು ತುಂಬಾ ಉಪಯುಕ್ತ ಆಗಿದೆ ಮತ್ತು ಇದನ್ನು ಹೇಗೆ ಬಳಸಿಕೊಂಡು ಸ್ವಾವಲಂಬಿಯಾಗಿ ಬದುಕಬಹುದು ಎಂದು ತಿಳಿಸಿದರು.

ಹುಣಸೂರು ತಾಲ್ಲೂಕಿನ ಪತ್ರಕರ್ತರ ಸಂಘದ ಹಾಗೂ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಹೆಚ್.ಆರ್.ಕೃಷ್ಣಕುಮಾರ್ ಮಾತನಾಡಿ,ಸಂಸ್ಥೆಯು ಗ್ರಾಮೀಣ ಭಾಗದ ಅಭ್ಯರ್ಥಿಗಳನ್ನು ಗುರುತಿಸಿ ತರಬೇತಿಯನ್ನು ನೀಡುತ್ತಿರುವುದರಿಂದ ಅನೇಕ ಜನರು ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ನಂತರ ಎಲ್ಲಾ ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೂತ ಯೂತ್ ಮೂವ್ ಮೆಂಟ್ ಸಂಸ್ಥೆಯ ಸಿಬ್ಬಂದಿ ವರ್ಗದವರಾದ ರವಿಕುಮಾರ್ ಪಿ ಜಿ,ರಾಜ. ಕೆ, ಚಂದ್ರೇಶ್, ದೇವರಾಜು ಎನ್ ಎಸ್,ರಾಜು, ಪಲ್ಲವಿ ಮತ್ತು ಗೀತಾ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular