Sunday, June 22, 2025
Google search engine

Homeರಾಜ್ಯಸುದ್ದಿಜಾಲಇಂದು ಸಂಜೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ

ಇಂದು ಸಂಜೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್: ಹೆಚ್.ಡಿ ಕುಮಾರಸ್ವಾಮಿ

ಮಂಡ್ಯ: ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ ಸರ್ಕಾರ ಇದ್ಯಾ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ. ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು.

RELATED ARTICLES
- Advertisment -
Google search engine

Most Popular