ನಾರಾಯಣಪುರ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಅಭುಜ್ಮಾದ್ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಸಾವನ್ನಪ್ಪಿದ್ದಾರೆ.
ಡಿಆರ್ಜಿ ಹಾಗೂ ಎಸ್‌ಟಿಎಫ್ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಾಗ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವೋವಾದಿಗಳ ಹಿರಿಯ ಕೇಡರ್ ಮಾಹಿತಿ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಯಿತು. ಸ್ಥಳದಲ್ಲಿ ಇಬ್ಬರು ಮಹಿಳಾ ನಕ್ಸಲರ ಶವಗಳು ಹಾಗೂ ಎರಡು ರೈಫಲ್ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.