Wednesday, May 21, 2025
Google search engine

Homeರಾಜಕೀಯನಿತ್ಯಾನಂದಗೆ ಭಕ್ತರಿದ್ದ ಹಾಗೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಭಕ್ತರಿದ್ದಾರೆ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ನಿತ್ಯಾನಂದಗೆ ಭಕ್ತರಿದ್ದ ಹಾಗೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಭಕ್ತರಿದ್ದಾರೆ: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಬೆಂಗಳೂರು: ಕೈಲಾಸದ ಸ್ವಾಮೀಜಿ ನಿತ್ಯಾನಂದಗೆ ಹೇಗೆ ಭಕ್ತರಿದ್ದಾರೆಯೋ ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಎಂಎಲ್ ​ಸಿ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯನವರೇ ರಾಮ, ಇನ್ನು ಅಯೋಧ್ಯೆಯ ರಾಮನನ್ನೇಕೆ ಹೋಗಿ ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್ ಆಂಜನೇಯ ನೀಡಿದ್ದ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸ ಆಶ್ರಮದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರವನ್ನು ಸಮರ್ಥಿಸಿಕೊಂಡ ಹರಿಪ್ರಸಾದ್, ಬಿಜೆಪಿಯ ಹಿರಿಯ ನಾಯಕ ಎಲ್ ​ಕೆ ಅಡ್ವಾಣಿ ಅವರ ಮೇಲೂ ಕೇಸ್ ಇತ್ತು. ಕರಸೇವಕ ಎಂದ ಮಾತ್ರಕ್ಕೆ ಅಪರಾಧ ಪ್ರಕರಣ ಎದುರಿಸುತ್ತಿರುವವರನ್ನೆಲ್ಲ ಬಿಟ್ಟುಬಿಡಲಾಗದು ಎಂದು ಹೇಳಿದ್ದಾರೆ.

30 ವರ್ಷ ಹಿಂದಿನ ಪ್ರಕರಣವನ್ನು ಈಗ ಯಾಕೆ ಕೆದಕಿದ್ದಾರೆ ಎಂಬುದು ಪ್ರಶ್ನೆಯೇ ಅಲ್ಲ. ಅಂಥವರನ್ನು ಇಷ್ಟು ವರ್ಷ ಬಂಧಿಸದೆ ಬಿಟ್ಟಿದ್ದೇ ತಪ್ಪು. ತಪ್ಪೆಸಗಿದ್ದರೆ ಕ್ರಮ ಕೈಗೊಳ್ಳಬೇಕು. ಅಪರಾಧಿಗಳು ಎಂದಿದ್ದರೂ ಅಪರಾಧಿಗಳೇ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಈ ಮಧ್ಯೆ, ಜನವರಿ 22ರಂದು ಅಯೋಧ್ಯೆಗೆ ತೆರಳುವವರಿಗೆ ಸರ್ಕಾರ ರಕ್ಷಣೆ ನೀಡಬೇಕು. ಗೋಧ್ರಾ ರೀತಿಯ ದುರಂತ ಮತ್ತೆ ಸಂಭವಿಸುವ ಮಾಹಿತಿ ಇದೆ ಎಂದು ಹರಿಪ್ರಸಾದ್​ ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

RELATED ARTICLES
- Advertisment -
Google search engine

Most Popular