Tuesday, October 7, 2025
Google search engine

Homeರಾಜ್ಯವಾಲ್ಮೀಕಿ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವ ನಮನ

ವಾಲ್ಮೀಕಿ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವ ನಮನ

  • ದೇಶ ಕಂಡ ಅಪರೂಪದ ಸಾಹಿತಿ” ಎಂದು ಶ್ಲಾಘನೆ

ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು.  ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು.

ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ  ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

RELATED ARTICLES
- Advertisment -
Google search engine

Most Popular