ಹಾಸನ : ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಅಕ್ಟೋಬರ್ 9 ರಿಂದ 23ರ ವರೆಗೆ ಜರುಗಲಿರುವ ನಾಡಿನ ವಿಖ್ಯಾತ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ಪತ್ರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಶಿವಲಿಂಗೇಗೌಡ, ಸಂಸದರಾದ ಶ್ರೇಯಸ್ ಎಂ ಪಟೇಲ್, ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.