Sunday, January 11, 2026
Google search engine

Homeರಾಜ್ಯಸುದ್ದಿಜಾಲನಗರದಲ್ಲಿ ಬಾಲ ಕಾರ್ಮಿಕ ಪತ್ತೆ

ನಗರದಲ್ಲಿ ಬಾಲ ಕಾರ್ಮಿಕ ಪತ್ತೆ

ದಾವಣಗೆರೆ: ಡಿಸೆಂಬರ್ 2 ರಂದು ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಶನಿವಾರ ಭೇಟಿ ನೀಡಿ ಅಧಿಕಾರಿಗಳು ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ತಪಾಸಣೆಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಅಪಾಯಕಾರಿ ಉದ್ದಿಮೆಯಲ್ಲಿ ಪತ್ತೆಯಾಗಿದ್ದು, ಪತ್ತೆಯಾದ ಕಿಶೋರಕಾರ್ಮಿಕನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ಮಾಲೀಕರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹಾಗೂ ಮಾಲೀಕರಿಗೆ ಕರಪತ್ರ & ಸ್ಟಿಕ್ಕರ್ಸ್ ನೀಡಿ ಜಾಗೃತಿ ಮೂಡಿಸಿದರು. ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್, ರಾಜಪ್ಪ.ಟಿ, ನಾಗೇಶ್ ಹಾಗೂ ಯೋಜನಾ ನಿರ್ದೇಶಕ ಪ್ರಸನ್ನ ಇ.ಎನ್ ಉಪಸ್ಥಿತರಿದ್ದರು

RELATED ARTICLES
- Advertisment -
Google search engine

Most Popular